Ad imageAd image

ರವಿವಾರ ಬೆಳಗಾವಿಗೆ ನರೇಂದ್ರ ಮೋದಿ ಆಗಮನ: ಅನೀಲ ಬೆನಕೆ

Bharath Vaibhav
WhatsApp Group Join Now
Telegram Group Join Now

ಬೆಳಗಾವಿ:- ಏ. 28 ಕ್ಕೆ ರವಿವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಯ ಬೃಹತ್ ಸಮಾವೇಶ ಮಡೆಸಲಿದ್ದಾರೆ. ಬೆಳಗಾವಿ ಲೋಕಸಭಾ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರ ಒಳಗೊಂಡಂತೆ ಬೃಹತ್ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ ಬೆನಕೆ ಅವರು ತಿಳಿಸಿದರು.‌

ಇಂದು ನಗರದ ಬಿಜೆಪಿ ಮಾಧ್ಯಮ ಕಾರ್ಯಾಲಯದಲ್ಲಿ ಮಾದ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಏ.28 ಕ್ಕೆ ಸಾಯಂಕಾಲ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಮಾಹಿತಿ ಇತ್ತು. ಆದರೆ ಸದ್ಯದ ಮಾಹಿತಿ ಪ್ರಕಾರ ಅಂದು ಬೆಳಗ್ಗೆ 11:30 ಕ್ಕೆ ಬೆಳಗಾವಿಗೆ ಆಗಮಿಸಿ, 12 ಗಂಟೆಗೆ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎರಡೂ ಲೋಕಸಭೆಯ ಅಭ್ಯರ್ಥಿಗಳಾದ ಅಣ್ಣಾಸಾಬ ಜೊಲ್ಲೆ ಹಾಗೂ ಜಗದೀಶ್ ಶೆಟ್ಟರ್ ಅವರು, ವೇದಿಕೆ ಮೇಲೆ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ವಿಜಯಂದ್ರ, ಮಾಜಿ ಸಿಎಂ ಯಡಿಯುರಪ್ಪ, ರಾಜ್ಯ ಚುನಾವಣಾ ಪ್ರಭಾರಿ ರಾಧಾಮೊಹನ ಧಾಸ್ ಬೆಳಗಾವಿ ಜಿಲ್ಲೆಯ ಸಂಸದರು, ಶಾಸಕರು, ಮಾಜಿ ಶಾಸಕರು ಭಾಗವಹಿಸುತ್ತಾರೆ.‌ ಚಿಕ್ಕೋಡಿ ಲೋಕಸಭಾ ಹಾಗೂ ಬೆಳಗಾವಿ ಲೋಕಸಭಾ ಒಳಗೊಂಡಂತೆ ಕಾರ್ಯಕ್ರಮ ಆಗಲಿದೆ. ಈಗಾಗಲೇ ಬೆಳಗಾವಿ ಹೊರವಲಯದ ಮಾಲಿನಿ ಸಿಟಿಯಲ್ಲಿ ಪೆಂಡಾಲ್ ಹಾಕಲು ಪೂಜೆ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಎಂಬಿ ಜಿರಳಿ ಮಾತನಾಡಿದ, ಜನಪ್ರಿಯ ನಾಯಕ ಮೋದಿಯವರು ಚುನಾವಣಾ ಪ್ರಚಾರಕ್ಕೆ ರವಿವಾರ 28 ರಂದು ಬರುತ್ತಿದ್ದಾರೆ. ಎರಡು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಸೇರುತ್ತಾರೆ ಎಂದು ತಿಳಿಸಿದರು.‌

ಈ ವೇಳೆ ಎಂಎಲ್ ಸಿ ಹನಮಂತ ನಿರಾಣಿ, ಮಾಜಿ ಶಾಸಕ ಸಂಜಯ ಪಾಟೀಲ್, ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಶುಭಾಸ ಪಾಟೀಲ್, ಎಫ್ ಎಸ್ ಸಿದ್ದನಗೌಡ, ಹನಮಂತ ಕೊಂಗಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.‌

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!