ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮನವಿ ಸ್ವೀಕರಿಸಿದೆ.

ಈ ವೇಳೆ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಎಸ್. ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಸ್.ಘಂಟಿ, ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಸುನಂದಾ, ಖಜಾಂಚಿ ಕಮಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ : ಪ್ರತೀಕ ಚಿಟಗಿ




