Ad imageAd image

ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ : ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು 

Bharath Vaibhav
ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ : ಕಾರ್ಯಕರ್ತೆ, ಸಿಬ್ಬಂದಿಯನ್ನು ಅಮಾನತು 
WhatsApp Group Join Now
Telegram Group Join Now

ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ವಂಚನೆ ಮಾಡಿ, ತಟ್ಟೆಗೆ ಹಾಕಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಕ್ಕಳಿಗೆ ತಟ್ಟೆಯಲ್ಲಿ ಹಾಕಿದ ಮೊಟ್ಟೆಯನ್ನು ಎತ್ತಿಕೊಂಡು ವಂಚಿಸುತ್ತಿದ್ದರು.ಕಾರ್ಯಕರ್ತೆ ನಡೆಗೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಅಲ್ಲದೇ ಅಂಗನವಾಡಿ ಕಾರ್ಯಕರ್ತೆಯ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕರ್ತೆ ಹಾಗೂ ಸಿಬ್ಬಂದಿ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

ಅಂಗನವಾಡಿಯಲ್ಲಿ ಮಕ್ಕಳನ್ನು ಸಾಲಾಗಿ ಕೂರಿಸಿ ಮಕ್ಕಳಿಗೆ ತಟ್ಟೆಯಲ್ಲಿ ಮೊದಲು ಮೊಟ್ಟೆ ಇಡಲಾಗುತ್ತದೆ. ಇದನ್ನು ಸಹಾಯಕಿ ಶೈನಜಾಬೇಗಂ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಾರೆ.

ಬಳಿಕ ಮಕ್ಕಳಿಂದ ಪ್ರಾರ್ಥನೆ ಮಾಡಿಸಲಾಗುತ್ತದೆ. ಪ್ರಾರ್ಥನೆ ಮುಗಿದ ಬಳಿಕ ಮಕ್ಕಳು ಇನ್ನೇನು ತಟ್ಟೆಯಲ್ಲಿದ್ದ ಮೊಟ್ಟೆ ತಿನ್ನಬೇಕು ಎನ್ನುವಷ್ಟರಲ್ಲಿ ಅಂಗನವಾಡಿ ಕಾರ್ಯಕರ್ತೆ ಬಂದು ಮಕ್ಕಳ ತಟ್ಟೆಯಲ್ಲಿದ್ದ ಮೊಟ್ಟೆಗಳನ್ನು ಎತ್ತಿಕೊಳ್ಳುತ್ತಾರೆ.

ಓರ್ವ ಮಗು ಮೊಟ್ಟೆಯನ್ನು ತಿನ್ನಲೆಂದು ಕೈಯಲ್ಲಿ ಹಿಡಿದುಕೊಂಡಿದ್ದ ಮೊಟ್ಟೆಯನ್ನು ಕೂಡ ಕಾರ್ಯಕರ್ತೆ ಕಸಿದುಕೊಂಡು ಹೋಗಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಎಂತವರ ಕರುಳು ಚುರ್ ಎನ್ನುವಂತಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಇಬ್ಬರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶೈನಜಾಬೇಗಂ ಅಮಾನತುಗೊಂಡವರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!