ಚಿಕ್ಕೋಡಿ: ಅಂಗನವಾಡಿ ಶಿಕ್ಷಕಿ ಮೇಲೆ ಅಲ್ಲಿನ ಅಡುಗೆ ಸಹಾಯಕಿಯ ಪತಿಯೇ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಬೆಳಗಾವಿಯ ಚಿಕ್ಕೋಡಿಯಲ್ಲಿ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಶೌಚಾಲಯ ಸ್ವಚ್ಛ ಮಾಡುವಂತೆ ಶಿಕ್ಷಕಿಯು ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಬಳಿ ಹೇಳಿದ್ದಾರೆ.
ಈ ವಿಚಾರವನ್ನ ಸಾವಿತ್ರಿಯು ತನ್ನ ಪತಿಗೆ ತಿಳಿಸಿದ್ದಾರೆ. ಇದರಿಂದ ಕೋಪಗೊಂಡು ನೇರವಾಗಿ ಅಂಗನವಾಡಿಗೆ ಆಗಮಿಸಿದ್ದ ಸಾವಿತ್ರಿ ಪತಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಎಂದು ಹೇಳಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದೇ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ.
ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಸದ್ಯ ಜೀವ ಭಯ ಇದೆ ರಕ್ಷಣೆ ನೀಡಿ ಅಂತಾ ಶಿಕ್ಷಕಿ ಕುಟುಂಬ ಕಣ್ಣೀರಿಡುತ್ತಿದೆ.ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.