Ad imageAd image

ದೇಶ ತೊರೆಯದಂತೆ ಅನಿಲ್ ಅಂಬಾನಿಗೆ ನೋಟಿಸ್ ಜಾರಿ

Bharath Vaibhav
ದೇಶ ತೊರೆಯದಂತೆ ಅನಿಲ್ ಅಂಬಾನಿಗೆ ನೋಟಿಸ್ ಜಾರಿ
WhatsApp Group Join Now
Telegram Group Join Now

ಮುಂಬೈ : ರಿಲಯನ್ಸ್ ಗ್ರೂಪ್ ನ ಅನಿಲ್ ಅಂಬಾನಿಗೆ ಸಂಕಷ್ಟ ಎದುರಾಗಿದ್ದು, 3000 ಕೋಟಿ ರೂ. ಸಾಲ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ.

ಅನಿಲ್ ಅಂಬಾನಿ ಇಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ ದಿನವೇ ಲುಕ್‌ಔಟ್‌ ನೋಟಿಸ್‌ ಜಾರಿಯಾಗಿದೆ.

ಆಗಸ್ಟ್‌ 5ರಂದು ವಿಚಾರಣೆಗೆ ಹಾಜರಾಗಲು ಇಡಿ ಸೂಚಿಸಿದೆ. ಇದು ಯೆಸ್‌ ಬ್ಯಾಂಕ್‌ನ 3,000 ಕೋಟಿ ರೂ.ಗಳ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಪ್ರಕಾರಣವಾಗಿದೆ. ಇಡಿ ಅಂಬಾನಿ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಇಡಿ ಸಮನ್ಸ್‌ಗೂ ಮುನ್ನ ಜುಲೈ 24 ರಂದು ಅಂಬಾನಿ ಅವರಿಗೆ ಸಂಬಂಧಿಸಿದ ಕಂಪನಿಗಳ ಮೇಲೆ ದಾಳಿಯನ್ನು ನಡೆಸಿತ್ತು. ದಿಲ್ಲಿ ಮತ್ತು ಮುಂಬೈನ ಹಲವು ಸ್ಥಳಗಳಲ್ಲಿ ನಡೆದ ಈ ದಾಳಿಗಳಲ್ಲಿ ಹಲವಾರು ದಾಖಲೆಗಳು ಮತ್ತು ಕಂಪ್ಯೂಟರ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2017 ರಿಂದ 2019ರ ನಡುವೆ ಯೆಸ್ ಬ್ಯಾಂಕ್‌ನಿಂದ ಅಂಬಾನಿ ಸಮೂಹದ ಕಂಪನಿಗಳಿಗೆ ಸುಮಾರು 3,000 ಕೋಟಿ ರೂ. ಸಾಲವನ್ನು ಮಂಜೂರು ಮಾಡಲಾಗಿತ್ತು. ಆದರೆ ಈ ಸಾಲದ ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಆರೋಪದ ಮೇಲೆ ತನಿಖೆ ಕೈಗೊಳ್ಳಲಾಗುತ್ತಿದೆ.

ವಿಜಯ್‌ ಮಲ್ಯ, ಮೇಹುಲ್‌ ಚೋಕ್ಸಿ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಾರಿ ನಿರ್ದೇಶನಾಲಯ ಅನಿಲ್‌ ಅಂಬಾನಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ ದಿನವೇ, ತನಿಖಾಧಿಕಾರಿಯ ಅನುಮತಿ ಇಲ್ಲದೆ ವಿದೇಶಕ್ಕೆ ಪ್ರಯಾಣ ಮಾಡುವಂತಿಲ್ಲ ಎನ್ನುವ ಲುಕ್‌ಔಟ್‌ ನೋಟಿಸ್‌ ಜಾರಿ ಮಾ ಡಿದೆ.

ಆಗಸ್ಟ್‌ 5ರಂದು ವಿಚಾರಣೆಗೆ ಹಾಜರಾಗಲು ಇಡಿ ಸೂಚಿಸಿದೆ. ಇದು ಯೆಸ್‌ ಬ್ಯಾಂಕ್‌ನ 3,000 ಕೋಟಿ ರೂ.ಗಳ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಪ್ರಕಾರಣವಾಗಿದೆ. ಇಡಿ ಅಂಬಾನಿ ಕಂಪನಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಇಡಿ ಸಮನ್ಸ್‌ಗೂ ಮುನ್ನ ಜುಲೈ 24 ರಂದು ಅಂಬಾನಿ ಅವರಿಗೆ ಸಂಬಂಧಿಸಿದ ಕಂಪನಿಗಳ ಮೇಲೆ ದಾಳಿಯನ್ನು ನಡೆಸಿತ್ತು. ದಿಲ್ಲಿ ಮತ್ತು ಮುಂಬೈನ ಹಲವು ಸ್ಥಳಗಳಲ್ಲಿ ನಡೆದ ಈ ದಾಳಿಗಳಲ್ಲಿ ಹಲವಾರು ದಾಖಲೆಗಳು ಮತ್ತು ಕಂಪ್ಯೂಟರ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2017 ರಿಂದ 2019ರ ನಡುವೆ ಯೆಸ್ ಬ್ಯಾಂಕ್‌ನಿಂದ ಅಂಬಾನಿ ಸಮೂಹದ ಕಂಪನಿಗಳಿಗೆ ಸುಮಾರು 3,000 ಕೋಟಿ ರೂ. ಸಾಲವನ್ನು ಮಂಜೂರು ಮಾಡಲಾಗಿತ್ತು. ಆದರೆ ಈ ಸಾಲದ ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬ ಆರೋಪದ ಮೇಲೆ ತನಿಖೆ ಕೈಗೊಳ್ಳಲಾಗುತ್ತಿದೆ.

ವಿಜಯ್‌ ಮಲ್ಯ, ಮೇಹುಲ್‌ ಚೋಕ್ಸಿ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಾರಿ ನಿರ್ದೇಶನಾಲಯ ಅನಿಲ್‌ ಅಂಬಾನಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದ ದಿನವೇ, ತನಿಖಾಧಿಕಾರಿಯ ಅನುಮತಿ ಇಲ್ಲದೆ ವಿದೇಶಕ್ಕೆ ಪ್ರಯಾಣ ಮಾಡುವಂತಿಲ್ಲ ಎನ್ನುವ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!