ಸೇಡಂ: ತಾಲೂಕಿನ ಮೇದಕ್ ಗ್ರಾಮ ಪಂಚಾಯಿತಿಯನ್ನು ದಿನಾಂಕ:20:01:2026ರಂದು ಅಂಬೇಡ್ಕರ್ ಯುವ ಸಂಘ ಶೀಲಾರಕೋಟ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದು ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಪೂರ್ಣ ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಹಾಗೂ ರೈತರು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳಲ್ಲಿನ ವಿಳಂಬ, ಅವ್ಯವಹಾರ ಹಾಗೂ ಆಡಳಿತಾತ್ಮಕ ನಿರ್ಲಕ್ಷ್ಯವನ್ನು ಖಂಡಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿದು ಇದಕ್ಕೆ ನಮ್ಮ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಹೇಳಿದರು.
ಪಂಚಾಯತಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಈ ಪ್ರತಿಭಟನೆಯಲ್ಲಿ ನಮ್ಮ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮಲ್ಲಣ್ಣಗೌಡ ಪಾಟೀಲ್ ಅವರು ಭಾಗವಹಿಸಲಿದ್ದಾರೆ ಆದ್ದರಿಂದ ಸುತ್ತಮುತ್ತಲಿನ ರೈತ ಮುಖಂಡರು ಭಾಗಿಯಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




