Ad imageAd image

ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಸೋದರಿಯನ್ನ ದತ್ತು ಪಡೆಯುತ್ತೇವೆ : ದಿಂಗಾಲೇಶ್ವರ್ ಶ್ರೀ 

Bharath Vaibhav
ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಸೋದರಿಯನ್ನ ದತ್ತು ಪಡೆಯುತ್ತೇವೆ : ದಿಂಗಾಲೇಶ್ವರ್ ಶ್ರೀ 
dingaleshwar swamiji
WhatsApp Group Join Now
Telegram Group Join Now

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಸೋದರಿಯರನ್ನು ದತ್ತು ಪಡೆಯುತ್ತೇವೆ ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಘೋಷಿಸಿದ್ದಾರೆ.

ಮೃತ ಅಂಜಲಿ ಅಂಬಿಗೇರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಶ್ರೀಗಳು, ಅಂಜಲಿ ಕುಟುಂಬದ ಜೊತೆಗೆ ನಾವಿದ್ದೇವೆ.ಅಂಜಲಿ ಸಹೋದರಿಯರ ಸಂಪೂರ್ಣ ಓದಿನ ಜವಾಬ್ದಾರಿಯನ್ನು ಬಾಲಹೊಸೂರು ಹಾಗೂ ಶಿರಹಟ್ಟಿ ಸಂಸ್ಥಾನ ಮಠಗಳು ಹೊರಲಿವೆ ಎಂದು ಹೇಳಿದ್ದಾರೆ.

ಅಂಜಲಿ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ನಿಟ್ಟಿನಲ್ಲಿ ಶುಕ್ರವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ ಅಂಜಲಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ. ಆರೋಪಿ ಆಟೋ ಚಾಲಕ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ (21)ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಗೀಶ್ ಪರಾರಿಯಾಗಿದ್ದ.

ಈತನ ಚಲವಲನ ಹುಬ್ಬಳ್ಳಿ ಗೋಕುಲ್ ರಸ್ತೆಯಲ್ಲಿನ ಹೊಸ ಬಸ್ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಜಾಡು ಹಿಡಿದು ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ಸದ್ಯ ಹುಬ್ಬಳ್ಳಿಗೆ ಕರೆತರಲಾಗಿದೆ ಎನ್ನಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!