ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋದಾ ತಮ್ಮ ನಿವಾಸದಲ್ಲಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಯಶೋದಾ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಕುಟುಂಬಸ್ಥರು ಹಾಗೂ ಸ್ಥಳೀಯರು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಜಲಿ ಅಂಬಿಗೇರ ಅವರ ಹತ್ಯೆಯ ಬಳಿಕ ತೀವ್ರವಾಗಿ ನೊಂದಿರುವ ಯಶೋದಾ ಅಕ್ಕನ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಯನ್ನು ಶೂಟೌಟ್ ಮಾಡಬೇಕೆಂದು ಒತ್ತಾಯಿಸಿದ್ದಾರೆ.