ಅಧ್ಯಕ್ಷರಾಗಿ ಚಿಕ್ಕೋಡಿಯ ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು ಇವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಆಗಿದೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯದ ನಾಯಕರಿಗೆ ನೀಡುವ ಭರವಸೆ ಮೊದಲು ನೀಡಿದ್ದ ಜಾರಕಿಹೊಳಿ ಸಹೋದರರು ಅದನ್ನು ಜಾರಿಗೆ ತಂದಿದ್ದಾರೆ. ಬ್ಯಾಂಕ್‌ನ ನಿರ್ದೇಶಕ ಮಂಡಳಿಯಲ್ಲೂ ಲಿಂಗಾಯತ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರಿಂದ ಈ ನಿರ್ಧಾರ ನಿರೀಕ್ಷಿತವಾಗಿಯೇ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಅಣ್ಣಾ ಸಾಹೇಬ ಜೊಲ್ಲೆ ಉಪಾಧ್ಯಕ್ಷರಾಗಿ ರಾಜು ಕಾಗೆ ಆಯ್ಕೆ




