Ad imageAd image

ಬಿಜೆಪಿಯಿಂದ ತುಮಿಳುನಾಡು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಅಣ್ಣಾಮಲೈ ಹೆಸರೇ ಇಲ್ಲ

Bharath Vaibhav
ಬಿಜೆಪಿಯಿಂದ ತುಮಿಳುನಾಡು ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಅಣ್ಣಾಮಲೈ ಹೆಸರೇ ಇಲ್ಲ
WhatsApp Group Join Now
Telegram Group Join Now

ತುಮಿಳುನಾಡು ವಿಧಾನಸಭಾ ಚುನಾವಣೆ 2026ಕ್ಕೆ ಸಂಬಂಧಿಸಿದಂತೆ ಬಿಜೆಪಿ ತನ್ನ ಮೊದಲ ಹಂತದ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಆದರೆ, ರಾಜ್ಯದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಹೆಸರು ಈ ಪಟ್ಟಿಯಲ್ಲಿಲ್ಲದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಗಮನಿಸಬೇಕಾದ ಪ್ರಮುಖ ಅಂಶವೆಂದರೆ, ರಾಜ್ಯದ ಮಾಜಿ ಪಕ್ಷದ ಅಧ್ಯಕ್ಷ ಅಣ್ಣಾಮಲೈ ಅವರ ಹೆಸರನ್ನು ಸೇರಿಸಲಾಗಿಲ್ಲ.

ತಮಿಳುನಾಡಿನಲ್ಲಿ ಚುನಾವಣಾ ಕಾವು ಏರುತ್ತಿದ್ದು, ಬಿಜೆಪಿ ತನ್ನ ಪ್ರಚಾರ ತಂತ್ರವನ್ನು ಚುರುಕುಗೊಳಿಸಿದೆ. ಇಂದು ಬಿಡುಗಡೆಯಾದ 27 ಅಭ್ಯರ್ಥಿಗಳ ಪಟ್ಟಿಯಲ್ಲಿ ಪ್ರಮುಖ ನಾಯಕರ ಹೆಸರುಗಳಿದ್ದರೂ, ಸ್ಟಾರ್ ಪ್ರಚಾರಕ ಎನ್ನಲಾಗುತ್ತಿದ್ದ ಅಣ್ಣಾಮಲೈ ಅವರಿಗೆ ಟಿಕೆಟ್ ಘೋಷಿಸದಿರುವುದು ಕುತೂಹಲ ಮೂಡಿಸಿದೆ. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತದೆಯೇ ಅಥವಾ ಮುಂದಿನ ಪಟ್ಟಿಯಲ್ಲಿ ಸ್ಥಾನ ನೀಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಶುಕ್ರವಾರ 27 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕೇಂದ್ರ ಸಚಿವ ಎಲ್. ಮುರುಗನ್ ಅವರನ್ನು ಅವಿನಾಶಿ ಕ್ಷೇತ್ರದಿಂದ ಮತ್ತು ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ಮೈಲಾಪುರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ವಾನತಿ ಶ್ರೀನಿವಾಸನ್ ಅವರು ಕೊಯಮತ್ತೂರು (ಉತ್ತರ) ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ.

ಪಕ್ಷವು ಮೊಡಕ್ಕುರಿಚಿಯಿಂದ ಕೀರ್ತಿಕಾ ಶಿವಕುಮಾರ್, ವಿಲವಂಕೋಡ್‌ನಿಂದ ಎಸ್. ವಿಜಯಧರಣಿ ಮತ್ತು ತಲ್ಲಿ ಕ್ಷೇತ್ರದಿಂದ ನಾಗೇಶ್ ಕುಮಾರ್ ಅವರನ್ನು ತನ್ನ ಅಭ್ಯರ್ಥಿಗಳನ್ನಾಗಿ ಹೆಸರಿಸಿದೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ದೇಶದ ನಾಲ್ಕು ರಾಜ್ಯಗಳು (ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ) ಮತ್ತು ಒಂದು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರ ಅಂತಿಮ ಹಂತಕ್ಕೆ ತಲುಪಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!