Ad imageAd image

ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

Bharath Vaibhav
ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ
WhatsApp Group Join Now
Telegram Group Join Now

ಬೆಂಗಳೂರು: ವಿಧಾನಸಭೆಯಿಂದ ಆಯ್ಕೆಯಾಗುವ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ.

ವಿಧಾನಸಭೆಯಿಂದ ಪರಿಷತ್ ಗೆ ಆಯ್ಕೆಯಾಗಿರುವ 11 ಸದಸ್ಯರ ಅವಧಿ ಜೂನ್ 17ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿಧಾನ ಪರಿಷತ್ ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ ಮಾಡಿದೆ.

ಜೂನ್ 13ರಂದು ಮತದಾನ ನಡೆಯಲಿದೆ. ಅಂದೇ ಫಲಿತಾಂಶ ಕೂಡ ಪ್ರಕಟವಾಗಲಿದೆ. ಮೇ 27ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜೂನ್ 3 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 6ರಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನ.ಜೂನ್ 13ರಂದು ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.

WhatsApp Group Join Now
Telegram Group Join Now
Share This Article
error: Content is protected !!