Ad imageAd image

ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ವಿಧಾನಪರಿಷತ್ತಿನ ಚುನಾವಣೆ ಘೋಷಣೆಯಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೂ ಟಿಕೆಟ್ ನೀಡಲಾಗಿದೆ.

ಈಗಾಗಲೇ ಬಿಜೆಪಿಯಿಂದ ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆಗೆ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಚುನಾಯಿತರಾಗಲು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.

ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಿಂದಲೂ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯ, ಎನ್ ಎಸ್ ಬೋಸರಾಜು, ಡಾ.ಕೆ ಗೋವಿಂದರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಐವಾನ್ ಡಿಸೋಜ ಹಾಗೂ ಬಸನಗೌಡ ಬಾರ್ದಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

 

 

WhatsApp Group Join Now
Telegram Group Join Now
Share This Article
error: Content is protected !!