Join The Telegram | Join The WhatsApp |
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿ ದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 35ಕ್ಕೆ ಏರಿದೆ. ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಸೋಮನಗೌಡ ಶಂಕರಗೌಡ ಪಾಟೀಲ (36) ಬಂಧಿತ. ‘ಗದಗ ನಗರದ ಮುನ್ಸಿಪಲ್ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ದಿಂದ ಪ್ರಶ್ನೆ ಪತ್ರಿಕೆಯನ್ನು ಬಹಿರಂಗ ಮಾಡುವಲ್ಲಿ ಈ ಆರೋಪಿಯ ಪಾತ್ರ ಪ್ರಮುಖ ವಾಗಿದೆ’ ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದರು.
Join The Telegram | Join The WhatsApp |