ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಬಾರಕೇರ(42) ಮೃತಪಟ್ಟಿದ್ದಾರೆ.
ಅವರು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಇದರೊಂದಿಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ದೇವಾಲಯದಲ್ಲಿ ಡಿಸೆಂಬರ್ 22ರಂದು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಎಂಟು ಜನ ಸಾವನ್ನಪ್ಪಿದ್ದಾರೆ.
ನಿನ್ನೆಯಷ್ಟೇ ರಾಮನಗರ ನಿವಾಸಿ ತೇಜೇಶ್ವರ(26) ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಪ್ರಕಾಶ ಬಾರಕೇರ ಇಂದು ಮೃತಪಟ್ಟಿದ್ದಾರೆ. 12 ವರ್ಷದ ಬಾಲಕ ವಿನಾಯಕ ಚೇತರಿಸಿಕೊಳ್ಳುತ್ತಿದ್ದಾನೆ.