ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಮೃತಪಟ್ಟಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನಿವಾಸಿಯಾಗಿರುವ ವೈಶಾಲಿ ನಿನ್ನೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.
ಇಂದು ಬೆಳಗ್ಗೆ ವೈಶಾಲಿಗೆ ಎದೆ ನೋವು ಕಾಣಿಸಿಕೊಂಡಿದ್ದು, ವೈಶಾಲಿ ಜೀವ ಹೋಗಿದೆ. ಯಾವ ಔಷಧ ಕೊಟ್ಟಿದ್ದಾರೆ ಎನ್ನುವುದು ಗೊತ್ತಾಗಬೇಕು. ಸಾವಿಗೆ ನ್ಯಾಯ ಸಿಗಬೇಕು. ಅಲ್ಲಿಯ ತನಕ ಮರಣೋತ್ತರ ಪರೀಕ್ಷೆಗೆ ಬಿಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ. ಹಹ