ಬೆಂಗಳೂರು: ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಆನ್ಲೈನ್ ಬೆಟ್ಟಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವೀರೇಂದ್ರ ಪಪ್ಪಿ ಅವರಿಗೆ ಸೇರಿದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಮತ್ತೆ 177.3 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.ಕೃಷಿ ಜಮೀನು, ನಿವೇಶನ ಸೇರಿದಂತೆ ಅನೇಕ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಬೆಟ್ಟಿಂಗ್ ಹಗರಣ, ಹಣ ಅಕ್ರಮ ವರ್ಗಾವಣೆ ಬಗ್ಗೆ ಕೇಸ್ ದಾಖಲಿಸಿ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ತನಿಖೆಯ ವೇಳೆ ವೀರೇಂದ್ರ ಪಪ್ಪಿ ಮತ್ತು ಸಹಚರರು ಮಾಸ್ಟರ್ ಮೈಂಡ್ ಎನ್ನುವುದು ಪತ್ತೆಯಾಗಿತ್ತು. ದೇಶಾದ್ಯಂತ ಆನ್ಲೈನ್ ಬೆಟ್ಟಿಂಗ್ ನೆಟ್ವರ್ಕ್ ಹೊಂದಿದ್ದರು.
ನೂರಾರು ಖಾತೆ ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದರು. ತನಿಖೆ ವೇಳೆ ದೊರೆತ ಸಾಕ್ಷ್ಯಗಳ ಆಧಾರದಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ 60ಕ್ಕೂ ಹೆಚ್ಚು ಕಡೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಚಿನ್ನ, ನಗದು, ಬೆಳ್ಳಿ, ವಾಹನಗಳನ್ನು ಇಡಿ ವಶಕ್ಕೆ ಪಡೆದುಕೊಂಡಿತ್ತು.
ಕೆ.ಸಿ. ವೀರೇಂದ್ರ ಮತ್ತು ಅವರ ಸಹಚರರು ಒಳಗೊಂಡ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ, ಬೆಂಗಳೂರು ವಲಯ ಕಚೇರಿಯ ಇಡಿ, 29.01.2026 ರಂದು ಪಿಎಂಎಲ್‌ಎ, 2002 ರ ಅಡಿಯಲ್ಲಿ ರೂ. 177.3 ಕೋಟಿ(ಅಂದಾಜು) ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಆನ್‌ಲೈನ್ ಬೆಟ್ಟಿಂಗ್/ಜೂಜಾಟ ಕಾರ್ಯಾಚರಣೆಗಳಿಂದ ಉತ್ಪತ್ತಿಯಾಗುವ ಅಪರಾಧದ ಆದಾಯದಿಂದ ನೇರವಾಗಿ ಪಡೆದ ಯಾವುದೇ ಆಸ್ತಿ/ಆಸ್ತಿಯ ಮೌಲ್ಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾದ ಆಸ್ತಿಗಳಲ್ಲಿ ಕೃಷಿ ಭೂಮಿ ಮತ್ತು ವಸತಿ ನಿವೇಶನಗಳು ಸೇರಿದಂತೆ ಸ್ಥಿರ ಆಸ್ತಿಗಳು ಮತ್ತು ಇತರ ಚರ ಆಸ್ತಿಗಳು ಸೇರಿವೆ ಎಂದು ಇಡಿ ತಿಳಿಸಿದೆ.




