ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ. ನವೆಂಬರ್ ಕ್ರಾಂತಿ ಬಗ್ಗೆ ಚರ್ಚೆಗಳು ಜೋರಾಗಿಯೇ ನಡೆಯುತ್ತಿದೆ. ಈ ನಡುವೆ ಸತೀಶ್ ಜಾರಕಿಹೊಳಿ ಮಾತಾಡಿದ್ದಾರೆ.
ಮಾಧ್ಯಮಗಳ ಜತೆ ಮಾತಾಡಿದ ಅವರು, ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ.ಇನ್ನೊಂದು 30 ದಿನ ಇದೆ ಅಷ್ಟೇ. ಏನಾಗತ್ತೆ ಕಾದುನೋಡೋಣ. ಕ್ರಾಂತಿ ಆಗೋದಕ್ಕೆ ಹೈಕಮಾಂಡ್ ಬಿಡಬೇಕಲ್ವಾ? ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ. ಏಕನಾಥ್ ಶಿಂಧೆ ಒಬ್ಬರೇ, ಪವಾರ್ ಕೂಡ ಒಬ್ಬರೇ, ಇನ್ನೊಬ್ಬ ಏಕನಾಥ್ ಶಿಂಧೆ ಪವಾರ್ ಹುಟ್ಟಿಕೊಳ್ಳಲು ಆಗಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಸುದೀರ್ಘ ಅನುಭವ ಇದೆ. ಹೈ ಕಮಾಂಡ್ ನಾಯಕರು ಎಲ್ಲವನ್ನೂ ಗಮನಿಸುತ್ತಿದ್ದು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಡಿಕೆಶಿ ಡೆಡ್ ಲೈನ್ ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದರು.




