ಮೈಸೂರು : ಜೀವಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ ಸಂಬಂಧ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಮೈಸೂರಿನ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಮುನಿರತ್ನ ಅವರು ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ.ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇನ್ನು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ.
ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನು ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದರು.
ಇದೀಗ ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋ ಗಜಾನನ ಭಟ್ ಶಾಸಕ ಮುನಿರತ್ನಗೆ 2 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.