ಡಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ, ಹಿಂಸಾಚಾರ ಪ್ರಕರಣ ಮುಂದುವರೆದಿದೆ. ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದೆ.
ಈ ಘಟನೆ ಬೆನ್ನಲ್ಲೇ ಇದೀಗ ಮತ್ತೋರ್ವ ಹಿಂದೂ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹಿಂದೂ ಯುವಕ ದೀಪು ಚಂದ್ರ ದಾಸ್ ಹತ್ಯೆ ಘಟನೆ ಬೆನ್ನಲ್ಲೇ ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಯುವಕನನ್ನು ಹತ್ಯೆ ಮಾಡಲಾಗಿದೆ.ಬಾಂಗ್ಲಾದ ಮೈಮನಸಿಂಗ ನಗರದಲ್ಲಿ ಹಿಂದೂ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹಿಂದೂ ಯುವಕನನ್ನು ಹತ್ಯೆಗೈದಿರುವ ಆರೋಪಿ ನೊಮಾನ ಮಿಯಾನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.




