ಉಡುಪಿ : ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಗೆ ಅಮಲು ಪದಾರ್ಥ ನೀಡಿ ಗ್ಯಾಂಗ್ ರೇಪ್ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಯುವತಿಯೋರ್ವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ನಾಲ್ವರು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಕಾರ್ಕಳದ ಅಯ್ಯಪ್ಪನಗರದ ಬಳಿಯ ಹಾಡಿಯಲ್ಲಿ ಕುಕ್ಕಂದೂರು ಗ್ರಾಮದ 21 ವರ್ಷದ ಯುವತಿ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. .ಪ್ರಮುಖ ಆರೋಪಿ ಅಲ್ತಾಫ್ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯ ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.