ಮೈಸೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ದಿನಕ್ಕೊಂದು ತಿರುವುಪಡೆಯುತ್ತಿರುವ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಸಾಲು ಸಾಲು ಅತ್ಯಾಚಾರ ಕೇಸ್ ಗಳು ದಾಖಲಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.
ಕಿಡ್ನ್ಯಾಪ್ ಕೇಸ್ ನ ಸಂತ್ರಸ್ತೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.ಮೈಸೂರು ಜಿಲ್ಲೆಯ ಕೆ.ಆರ್.ನಗರ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಪ್ರಕರಾ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಲಯದ ಮುಂದೆ ಸೆಕ್ಷನ್ 164ರ ಅಡಿಯಲ್ಲಿ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾರೆ.
ಗನ್ನಿಕಡ ತೋಟದ ಮನೆಯಲ್ಲಿ ತೋಟದ ಕೆಲಸ ಮಾಡುವಾಗ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 9ರಂದು ಗನ್ನಿಕಡ ತೋಟದ ಮನೆಯಲ್ಲಿ ಪೊಲೀಸರು ಸ್ಥಳಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.