ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 10 ವರ್ಷದ ಬಾಲಕಿ ಮೇಲೆ ವೃದ್ದನೋರ್ವ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ವೃದ್ದನೋರ್ವ ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.ಆಸಿಫ್ ಭಾಗವಾನ ಎಂಬಾತ ಈ ಕೃತ್ಯ ಎಸಗಿದ್ದಾನೆ.
ಸದ್ಯ ಆರೋಪಿಯನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.