Ad imageAd image
- Advertisement -  - Advertisement -  - Advertisement - 

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Bharath Vaibhav
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ
RAPE
WhatsApp Group Join Now
Telegram Group Join Now

ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕೋಲಾರದಲ್ಲಿ 7 ವರ್ಷದ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುಸ್ಟೂರು ಗ್ರಾಮದ ಸಂದೀಪ್ (21) ಎಂಬಾತ ಶನಿವಾರ ಗಾರೆ ಕೆಲಸ ಕೇಳಿಕೊಂಡು ಅದೇ ಗ್ರಾಮದ ಮನೆಯೊಂದಕ್ಕೆ ತೆರಳಿ ಸಂತ್ರಸ್ತ ಬಾಲಕಿಯ ತಂದೆ ಜೊತೆಗೆ ಕೆಲಸಕ್ಕೆ ಹೋಗಿದ್ದಾನೆ.ಬಳಿಕ ಮನೆಗೆ ಬಂದು ಬಾಲಕಿಗೆ ಫೋನ್ ಕೊಡುವುದಾಗಿ ಹೇಳಿ ಮಹಡಿಯ ಮೇಲೆ ಕರೆದುಕೊಂಡು ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತೆ ಬಾಲಕಿಯ ತಾಯಿ ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸದ್ಯ ಬಾಲಕಿಯನ್ನು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

 

WhatsApp Group Join Now
Telegram Group Join Now
Share This Article
error: Content is protected !!