ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.
ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ಈ ಘಟನೆ ನಡೆದಿದೆ. ಹಿಂದಿನಿಂದ ಬೈಕ್ ಗೆ BMTC ಬಸ್ ಡಿಕ್ಕಿಯಾಗಿ ಹಿಂಬದಿ ಕುಳಿತಿದ್ದ ಮಹಿಳೆ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಬಸ್ ಕೆ ಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ತೆರಳುತಿತ್ತು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 2 ದಿನದ ಹಿಂದೆ ಪೀಣ್ಯದ 2 ನೇ ಹಂತದಲ್ಲಿ ರಸ್ತೆಬದಿಯಿದ್ದ ಕ್ಯಾಂಟೀನ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಯುವತಿ ಮೃತಪಟ್ಟು, ಐವರು ಗಾಯಗೊಂಡಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.




