ಸೇಡಂ: ದಾವಣಗೆರೆಯ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಕೊಡಮಾಡುವ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿಗೆ ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಅಪ್ಪಾಜಿ ನಿಡಗುಂದಾ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ಸಾಲಿಗ್ರಾಮ ಗಣೇಶ ಶೆಣೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಷ್ಠಾನದ ೭೦ನೇ ವರ್ಷದ ಕನ್ನಡ ನಿತ್ಯೋತ್ಸವ ಅಂಗವಾಗಿ ನೀಡುವ ೨೦೨೫ನೇ ಸಾಲಿನ ಸರಸ್ವತಿ ಸಾಧಕ ಸಿರಿ ರಾಷ್ಟ್ರ ಪ್ರಶಸ್ತಿಗೆ ಪತ್ರಕರ್ತ ಶಿವಕುಮಾರ ಅವರ ಮಾಧ್ಯಮ ಕ್ಷೇತ್ರದಲ್ಲಿನ ಸಾಧನೆ ಮತ್ತು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ಧಾರೆ.
ಬರುವ ಏಪ್ರೀಲ್ ೨೭ನೇ ರಂದು ದಾವಣಗೆರೆಯಲ್ಲಿ ಕಲಾಕುಂಚ ಸಾಂಸ್ಕೃತಿ ಸಂಸ್ಥೆಯ ಸಹಯೋಗದೊಂದಿಗೆ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್