ಚಿಕ್ಕೋಡಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದನ್ನು ಖಂಡಿಸಿ ಪೊಲೀಸರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಒಬ್ಬ ಜೀವಂತ ಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟನ್ನು ಹಾಕಿರುವವನ ವಿರುದ್ಧ ಕ್ರಮ ಕೈಗೊಳ್ಳಲು ಮನವಿ
ಹುಬ್ಬಳ್ಳಿ ನಗರದಲ್ಲಿ ದಿನಾಂಕ 07-01-2026 ರ ಬುಧವಾರದಂದು ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಯವರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಘಟನೆ ನಾಗರೀಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ.
ಇದು ಅಕ್ಷಮ್ಮ ಅಪರಾಧವಾಗಿದೆ. ಮಹಿಳೆಯರಿಗೆ ಪವಿತ್ರ ಸ್ಥಾನ ನೀಡುವ ಈ ಸಮಾಜದಲ್ಲಿ ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆ ಎಂದು ನೋಡದೆ. ಸಾರ್ವಜನಿಕವಾಗಿ ದೌರ್ಜನ್ಯ ಎಸಗಲು ಪೊಲೀಸರಿಗೆ ಕುಮ್ಮಕ್ಕು ನೀಡಿದ್ದು ನಾಚಿಕೆಗೇಡಿನ ಸಂಗತಿ ಪೊಲೀಸ್ ಇಲಾಖೆಯ ಮೇಲೆ ಸರ್ಕಾರದ ನಿಯಂತ್ರಣ ಇಲ್ಲದಿರುವುದು ಇಂದಿನ ಈ ಘಟನೆಯ ಸಾಕ್ಷಿಯಾಗಿದೆ.
ಇದನ್ನು ನಾವು ಖಂಡಿಸುತ್ತೇವೆ ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಅವರು ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಹಾಗೆಯೇ ಒಬ್ಬ ಜೀವಂತ ಜನಪ್ರತಿನಿಧಿಗೆ ಶ್ರದ್ಧಾಂಜಲಿ ಪೋಸ್ಟನ್ನು ಹಾಕಿರುವ ಬಿಲ್ಲವಾ ಸಂದೇಶ ಎಂಬುವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಸುಳ್ಯದ ಶಾಸಕಿ ಭಾಗಿರತಿ ಮುರು, ರವರನ್ನು ತೇಜೋವಧೆ ಮಾಡುವ ಪೋಸ್ಟ್ ನ್ನು ಹಾಕಿರುತ್ತಾನೆ. ಈ ರೀತಿಯ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವುದನ್ನು ನೋಡಿದರೆ ಆತನ ಮನಸ್ಥಿತಿ ಏನೂ ಎಂದು ಅರ್ಥ ಆಗುತ್ತದೆ
ದಲಿತ ಶಾಸಕಿಗೆ ಈ ಅಪಮಾನ ಮಾಡಿರುವುದು ತೀವು ಖಂಡನೀಯ, ಈತನ ಮೇಲೆ ಮೊಕದ್ರಮ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು.
ಮಹಿಳೆಯರಿಗೆ ಸುರಕ್ಷತೆಯೇ ಮುಖ್ಯ ಸಮಾಜದಲ್ಲಿ ಪೊಲೀಸ್ ವ್ಯವಸ್ಥೆ ಇರುವುದು ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಹೊರತು ಗೂಂಡಾಗಿರಿ ಮಾಡಲು ಅಲ್ಲ ಶಾಂತಿ ಸುವ್ಯವಸ್ಥೆ ಹಾಳು ಮಾಡಿರುವ ಕಾಂಗ್ರೆಸ್ ಸರಕಾರ ದಬ್ಬಾಳಿಕೆ ನಡೆಸುತ್ತಿದೆ. ಮಹಿಳೆಯರನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಈ ಘಟನೆ ಕುರಿತು ಗೃಹ ಸಚಿವರು ಕೂಲಂಕುಷವಾಗಿ ತನಿಖೆ ನಡೆಸಿ ಘಟನೆಗೆ ಕಾರಣರಾದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕು.
ಹಾಗೆಯೇ ಮಹಿಳೆಯ ಮೇಲೆ ದರ್ಪ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ, ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
ನಾಗರೀಕ ಸಮಾಜ ತಲೆತಗ್ಗಿಸುವಂತಹ ಇಂತಹ ಘಟನೆಗಳು ಮುಂದೆಂದು ನಡೆಯದಂತೆ ಎಚ್ಚರ ವಹಿಸಬೇಕು. ಸರ್ಕಾರದ ಆಡಳಿತ ವೈಫಲ್ಯವನ್ನು ತಿಳಿಸಲು ಹಾಗೂ ಅನ್ಯಾಯಕ್ಕೆ ಒಳಗಾದ ಬಿಜೆಪಿ ಕಾರ್ಯಕರ್ತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮನವಿ.
ಈ ಸಂದರ್ಭದಲ್ಲಿ ಶ್ರೀಮತಿ ಶಾಂಭವಿ ಆರ್ ಅಶ್ರತಪುರ ಕರ್ನಾಟಕ ರಾಜ್ಯ ಬಿಜೆಪಿ ಮೋರ್ಚಾ ಅಧ್ಯಕ್ಷರು, ಸತೀಶ್ ಅಪ್ಪಾಜಿಗೋಳ ವಕೀಲರು ಜಿಲ್ಲಾ ಅಧ್ಯಕ್ಷರು ಚಿಕ್ಕೋಡಿ,
ಬಿ ಖೂಕಾಲೆ ಚಿಕ್ಕೋಡಿ ಜಿಲ್ಲಾ ಉಪಾಧ್ಯಕ್ಷರು ವಕೀಲರು.
ವರದಿ : ರಾಜು ಮುಂಡೆ




