ಅಗ್ನಿಪಥ್ ಯೋಜನೆಯಡಿ 2027ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ, ದಾವಣಗೆರೆ. ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ, ಉಡುಪಿ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತರು ಆನ್‌ಲೈನ್ ನೋಂದಣಿ ಪೊರ್ಟಲ್-WWW.JOININDINARMY.NIC.IN ರ ಮೂಲಕ ಏ. 01 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂ. ಸಂ.: 0824-2458376, 7411497644 ಅಥವಾ WWW.JOININDINARMY.NIC.IN ಎಂಬ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಭಾರತೀಯ ಸೇನೆಯಲ್ಲಿ ಆಯ್ಕೆ ವಿಧಾನವು ನ್ಯಾಯಯುತ ಮತ್ತು ಪಾರದರ್ಶಕವಾಗಿದ್ದು, ಅರ್ಹತೆ ಮತ್ತು ದೈಹಿಕ ಕ್ಷಮತೆ ಮೇರೆಗೆ ಮಾತ್ರ ನಡೆಯುತ್ತದೆ.
ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿನ ಆಯ್ಕೆ ಪ್ರಕ್ರಿಯೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳಂತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




