Ad imageAd image

ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Bharath Vaibhav
ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿನ 74 ಆದರ್ಶ ವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಪ್ರವೇಶ ನೀಡುವ ಸಂಬಂಧ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ ಎಂದಿದ್ದಾರೆ.

ಈ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪೋಷಕರು ದಿನಾಂಕ 23.01.2026 ರಿಂದ 25.02.2026 ರವರೆಗೆ www.schooleducation.karnataka.gov.in ಹಾಗೂ www.vidyavahini.karnataka.gov.in ವೆಬ್‌ಸೈಟ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ನಿಗದಿತ ಅವಧಿಗೆ ನಿಯಮಾನುಸಾರ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ಹಾಗೂ ಪೋಷಕರು ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ಮಾನದಂಡಗಳು ಮತ್ತು ಮಾರ್ಗಸೂಚಿಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂಬುದಾಗಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!