Ad imageAd image

ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ 

Bharath Vaibhav
ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಕರ್ನಾಟಕ ಕಾರ್ಮಿಕ ಮಂಡಳಿಯ ವೆಬ್‍ಸೈಟ್ WWW.klwbapps.karnataka.gov.in ಮೂಲಕ ಅರ್ಜಿಆಹ್ವಾನಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧನ ಸಹಾಯ ಬಯಸುವ ವಿದ್ಯಾಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪ.ಜಾ, ಪ.ಪಂ.ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಹಾಗೂ ಕಾರ್ಮಿಕರ ಮಾಸಿಕ ವೇತನ ರೂ.35,000 ಗಿಂತ ಮೀರಿರಬಾರದು. ಅರ್ಜಿ ಸಲ್ಲಿಸಲು 2025 ರ ಜನವರಿ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ & 2ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು ಇಲ್ಲಿಗೆ ಖುದ್ದಾಗಿ ಭೇಟಿ ನೀಡಬಹುದು. ಅಥವಾ ದೂ,ಸಂ 080-23475188, 8277291175, 8277120505, 9141585402, 9141602562 ಗೆ ಕರೆ ಮಾಡಬಹುದು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
Share This Article
error: Content is protected !!