ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪದವಿ ಪೂರ್ವ ಕಾಲೇಜುಗಳನ್ನು ತೆರೆಯೋದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಓಪನ್ ಮಾಡೋದಕ್ಕೆ ಅವಕಾಶ ನೀಡಲಾಗಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4ರನ್ವಯ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಹ ಖಾಸಗಿ ಶೀಕ್ಷಣ ಸಂಸ್ಥೆಗಳಿಂದ, ಟ್ರಸ್ಟ್ ಗಳಿಂದ ಅರ್ಜಿಗಳ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ ಎಂದಿದ್ದಾರೆ.
ದಿನಾಂಕ 14-11-2023ರಿಂದ ದಿನಾಂಕ 31-03-2024ರ ಸಂಜೆ 5 ಗಂಟೆಯ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ.
ಇಲಾಖೆಯ ವೆಬ್ ಸೈಟ್ https://pue.karnataka.gov.in/ ಇಲ್ಲಿ ನಿಗದಿತ ಲಿಂಕ್ https://dpue-pragathi.karnataka.gov.in/newcollege2024 ರಿಂದ ಪಡೆಯಬಹುದು ಎಂದು ತಿಳಿಸಿದೆ.
2022-23 ಮತ್ತು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳ್ನು ಪ್ರಾರಂಭಿಸಲು ಆನ್ ಲೈನ್ ಮೂಲಕ ಈಗಾಗಲೇ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ, ಟ್ರಸ್ಟ್ ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಹೇಳಿದೆ.