Ad imageAd image

ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ 

Bharath Vaibhav
ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳದಲ್ಲಿ ಖಾಲಿ ಇರುವ 34 ಹುದ್ದೆಗಳಿಗೆ ಅರ್ಜಿ ಆಹ್ವಾನ 
WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ (ನಿ), ಬೆಂಗಳೂರು ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 34 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 7/2/2026 ಕೊನೆಯ ದಿನವಾಗಿದೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ಅಧಿಕೃತ ವೆಬ್ ಸೈಟ್‌ನಲ್ಲಿ ನೀಡಿರುವ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್‌ಲೈನ್ ಮುಖಾಂತರವೇ ಪಾವತಿಸತಕ್ಕದ್ದು.

ಅರ್ಜಿಗಳನ್ನು ಖುದ್ದಾಗಿ/ ಅಂಚೆ/ ಕೋರಿಯರ್ ಇತ್ಯಾದಿಗಳ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಕೆ ಮಾಡುವ ಮೊದಲು ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳಿ ಎಂದು ಮನವಿ ಮಾಡಲಾಗಿದೆ.

ಹುದ್ದೆಗಳ ವಿವರ: ಫಾರ್ಮಸಿಸ್ಟ್ (7) ವೇತನ 25,800-52,650 ರೂ.ಗಳು. ಪ್ರಥಮ ದರ್ಜೆ ಗುಮಾಸ್ತರು (10) ವೇತನ 21,400-45,300 ರೂ.ಗಳು. ವಿಕ್ರಯ ಸಹಾಯಕರು (16) ವೇತನ 19,950-37,900 ರೂ.ಗಳು. ವಿಕ್ರಯ ಸಹಾಯಕ (1) ವೇತನ 19,950-37,900 ರೂ.ಗಳು.

ಅರ್ಜಿಗಳನ್ನು ಸಲ್ಲಿಕೆ ಮಾಡುವ ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ ಮೀರಿರಬಾರದು. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು.

ಸಾಮಾನ್ಯ ವರ್ಗ 38, ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ, ಪ್ರವರ್ಗ 3ಬಿ 41 ವರ್ಷ, ಪರಿಶಿಷ್ಟ ಜಾತಿ ಪ್ರ-ಎ/ ಪ.ಜಾ ಪ್ರ-ಬಿ/ ಪ.ಜಾ ಪ್ರ-ಸಿ/ ಪ.ಪಂ/ ಪ್ರವರ್ಗ-1 43 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು ಪ.ಜಾತಿ ಪ್ರ-ಎ/ ಪ.ಜಾ ಪ್ರ-ಬಿ/ ಪ.ಜಾತಿ ಪ್ರ-ಸಿ/ ಪ.ಪಂ/ ಪ್ರ-1 ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ರೂ. 500 ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 1,000 ರೂ. ಶುಲ್ಕವನ್ನು ನಿಗದಿಗೊಳಿಸಲಾಗಿದೆ.

ಸೂಚನೆಗಳು

1. ಈ ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಿರುವ ಹುದ್ದೆಗಳ ಸಂಖ್ಯೆ ಮತ್ತು ವರ್ಗೀಕರಣವು ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಯಾಗಬಹುದಾಗಿದ್ದು, ನೇಮಕಾತಿ ಪ್ರಾಧಿಕಾರವು ಬದಲಾವಣೆ ಮಾಡುವ ಮತ್ತು ರದ್ದುಪಡಿಸುವ ಅಧಿಕಾರವನ್ನು ಕಾಯ್ದಿರಿಸಿಕೊಂಡಿದೆ.

2. ಅರ್ಜಿಗಳನ್ನು ಆನ್-ಲೈನ್ (ON-LINE) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕೋರಿಯರ್/ ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಒಂದು ವೇಳೆ ಆ ರೀತಿ ಅರ್ಜಿಗಳನ್ನು ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

3. ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸತಕ್ಕದ್ದು. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ, ಅಂತಹ ಅಭ್ಯರ್ಥಿಗಳು ಒಂದೇ ನೋಂದಣಿ ಸಂಖ್ಯೆಯಡಿಯಲ್ಲಿಯೇ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ, ಪ್ರತ್ಯೇಕವಾಗಿ ಅರ್ಜಿ ಸಲ್ಲಿಸತಕ್ಕದ್ದು.

4. ಅಭ್ಯರ್ಥಿಗಳು ಅರ್ಜಿಯನ್ನು WEB SITEನಲ್ಲಿ ತಿಳಿಸಿರುವ ಸೂಚನೆಗಳನ್ವಯ ಮಾತ್ರ ಭರ್ತಿ ಮಾಡತಕ್ಕದ್ದು.

5. ಆನ್-ಲೈನ್ (ON-LINE) ಮೂಲಕ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಪ್‌ಲೋಡ್ ಮಾಡಬೇಕಾದ ಪ್ರಮಾಣ ಪತ್ರಗಳು/ ದಾಖಲಾತಿಗಳನ್ನು ಸ್ಪಷ್ಟವಾಗಿ ಕಾಣುವಂತೆ ಮತ್ತು ಓದಲು ಸಾಧ್ಯವಾಗುವಂತೆ ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡತಕ್ಕದ್ದು. ಸ್ಪಷ್ಟತೆ ಇಲ್ಲದೆ ಇರುವ ದಾಖಲಾತಿಗಳನ್ನು ಅಪ್ ಲೋಡ್ ಮಾಡಿದ್ದಲ್ಲಿ ಅಂಥಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

6. ಅಭ್ಯರ್ಥಿಗಳು ಅಪೂರ್ಣ/ ಅಸ್ಪಷ್ಟ/ ತಪ್ಪು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

7. ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ಅರ್ಜಿಯಲ್ಲಿ ನಮೂದಿಸಿರುವ ಅಂಚೆ ವಿಳಾಸ, ಮೊಬೈಲ್ ನಂಬರ್ ಮತ್ತು ಇ-ಮೇಲ್ ಐ.ಡಿ.ಗಳ ಮೂಲಕವೇ ಸಂಪರ್ಕಿಸಲಾಗುವುದು.

8. ಸಂಸ್ಥೆಯು ಅಭ್ಯರ್ಥಿಯೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸುವುದಿಲ್ಲ.

9. ನಿಗದಿತ ಶುಲ್ಕ ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಮತ್ತು ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ಸು ಮಾಡಲಾಗುವುದಿಲ್ಲ.

ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://virtualofficeerp.com/ksccf2026 ನಲ್ಲಿ ನೀಡಿರುವ ಲಿಂಕ್ ಮುಖಾಂತರವೇ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ನಿಗದಿತ ಅರ್ಜಿ ಶುಲ್ಕವನ್ನು ಆನ್-ಲೈನ್ ಮುಖಾಂತರವೇ ಪಾವತಿಸತಕ್ಕದ್ದು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!