ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದವರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಸ್ವಯಂ ಉದ್ಯೋಗ ಯೋಜನೆಗಳಾದ ನೇರ ಸಾಲ ಯೋಜನೆಯಡಿ ಸಣ್ಣ ಆದಾಯ ಗಳಿಸುವ ಆರ್ಥಿಕ ಚಟುವಟಿಕೆಗಳಿಗಾಗಿ ಘಟಕ ವೆಚ್ಚ ಗರಿಷ್ಟ ರೂ.1.00 ಲಕ್ಷ ಇದರಲ್ಲಿ ಶೇ.50 ನಿಗಮದ ಅವಧಿ ಸಾಲ, ಶೇ.50 ಸಹಾಯಧನವಿರುತ್ತದೆ.
ಉದ್ಯಮ ಶೀಲತಾಅಭಿವೃದ್ಧಿಯೋಜನೆ
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ನಿಗಮದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಸಹಯೋಗದೊಂದಿಗೆ ಉದ್ಯೋಗ ಅವಕಾಶ ಒದಗಿಸಲಾಗುತ್ತದೆ.
ಯೋಜನೆಯಡಿ ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1 ಲಕ್ಷ, ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2 ಲಕ್ಷ. ಸ್ವಾವಲಂಬಿ ಸಾರಥಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕವೆಚ್ಚದ ಶೇ. 75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.4 ಲಕ್ಷ ಒದಗಿಸಲಾಗುವುದು.
ಭೂಒಡೆತನಯೋಜನೆ
ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ 1-00 ಎಕರೆ ತರಿ ಜಮೀನು ಹಾಗೂ 2-00 ಎಕರೆ ಖುಷ್ಕಿ ಜಮೀನು ಅಥವಾ ರೂ.25 ಲಕ್ಷ ಘಟಕ ವೆಚ್ಚದಲ್ಲಿ ಗರಿಷ್ಟ ಎಷ್ಟು ವಿಸ್ತೀರ್ಣ ಬರುತ್ತದೆಯೋ ಅಷ್ಟು ವಿಸ್ತೀರ್ಣ ಖರೀದಿಸಿ ಕೊಡಲಾಗುವುದು. ಶೇ.50 ರಷ್ಟು ಸಹಾಯಧನ, ಶೇ.50 ರಷ್ಟು ಅವಧಿ ಸಾಲ ನೀಡಲಾಗುವುದು.
ಗಂಗಾಕಲ್ಯಾಣಯೋಜನೆ
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಿಕೊಡಲಾಗುವುದು. ಘಟಕವೆಚ್ಚ ರೂ.3.75 ಲಕ್ಷ, ಇದರಲ್ಲಿ ರೂ.50,000 ಸಾಲವೂ ಇರುತ್ತದೆ.
ಮೈಕ್ರೋಕ್ರೆಡಿಟ್ಪ್ರೇರಣಾಯೋಜನೆ
ಮಹಿಳಾ ಸ್ವ ಸಹಯ ಗುಂಪುಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು.
ಘಟಕವೆಚ್ಚ ರೂ.2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು.
ಇದರಲ್ಲಿ ರೂ.1.50 ಲಕ್ಷ ಸಹಾಯಧನ ರೂ.1 ಲಕ್ಷ ಸಾಲ ಕೊಡಲಾಗುವುದು(ಶೇ.4 ರಷ್ಟು ಬಡ್ಡಿ ದರ).
ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ನಲ್ಲಿ ಮಾತ್ರ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ನಂತರ ಅದರ ಸ್ವೀಕೃತಿಯನ್ನು ಫಲಾನುಭವಿಗಳು ತಮ್ಮ ಬಳಿ ಇಟ್ಟುಕೊಳ್ಳಬೇಕು. ಆ ಸ್ವೀಕೃತಿಯ ಯಾವುದೇ ಪ್ರತಿ ಹಾಗೂ ಯಾವುದೇ ದಾಖಲಾತಿಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸುವ ಅಗತ್ಯವಿರುವುದಿಲ್ಲ.
ಮಂಡಳಿ ವಿವೇಚನಾ ಕೋಟಾ ಅಥವಾ ಸರಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸುವಿಧಾ ಪೋರ್ಟಲ್ ಮೂಲಕವೇ ಮಾತ್ರ ಸಲ್ಲಿಸಬೇಕು.
ವಿವಿಧ ನಿಗಮಗಳಿಗೆ ಸಂಬಂಧಪಡುವ ಜಾತಿಯ ಫಲಾನುಭವಿಗಳು ಆಯಾ ನಿಗಮದ ಅಡಿಯಲ್ಲಿ ಮಾತ್ರವೇ ಅರ್ಜಿ ಸಲ್ಲಿಸಬೇಕು. ಬೇರೆ ನಿಗಮದಡಿ ಅರ್ಜಿ ಸಲ್ಲಿಸಿದಲ್ಲಿ ಹಾಗೂ ಅಭ್ಯರ್ಥಿಯು ಸಲ್ಲಿಸಿರುವ ಅರ್ಜಿ ಆ ನಿಗಮದಡಿ ಬರದೇ ಇದ್ದಲ್ಲಿ ಅದಕ್ಕೆ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.
ಅರ್ಜಿ ಸಲ್ಲಿಸಲು ನವೆಂಬರ್ 29 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್: https://sevasindhu.karnataka.gov.in ನಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ: http://adcl.karnataka.gov.in, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ: http://adijmbava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: http://kbdc.karnataka.gov.in, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ: http://banjarathanda.kar.nic.in, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ: http://kmvstdcl.kanataka.gov.in, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ: http://ksskdc.kar.nic.in ಗೆ ಭೇಟಿ ನೀಡಬಹುದು.