ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2024-25 ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2024ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕ ಆಗಿದ್ದು, ಕಸಾಪ ವೆಬ್ಸೈಟ್ ಮೂಲಕವು ಅರ್ಜಿ ಪಡೆಯಬಹುದು.
ಪರೀಕ್ಷಾ ಶುಲ್ಕದೊಂದಿಗೆ ₹25 ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಪ್ರಕಟಣೆ ತಿಳಿಸಿದೆ.