ನವದೆಹಲಿ : ಅನುಕಂಪದ ಹುದ್ದೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಮೃತ ನೌಕರನ ಅವಲಂಬಿತರು ಅನುಕಂಪದ ಆಧಾರದ ಮೇಲೆ ಕೆಲಸಕ್ಕೆ ನೇಮಕವಾದ ಬಳಿಕ ಅವರ ಬೇಡಿಕೆ ಈಡೇರಿದಂತೆ. ನಂತರ ಅದನ್ನೇ ಪುನಃ ಚಲಾಯಿಸಿ ಉನ್ನತ ಹುದ್ದೆಗೆ ಬೇಡಿಕೆ ಇಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಅನುಕಂಪದ ಆಧಾರದ ಮೇಲೆ ಸ್ವೀಪರ್ ಕೆಲಸಕ್ಕೆ ನೇಮಕಗೊಂಡಿದ್ದ ತಮಿಳುನಾಡಿನ ಎಂ. ಜಯಬಾಲ ಮತ್ತು ಎಸ್. ವೀರಮಣಿ ಅವರು ತಮ್ಮನ್ನು ಕಿರಿಯ ಸಹಾಯಕ ಹುದ್ದೆಗೆ ನೇಮಕ ಮಾಡಬೇಕು ಎಂಬ ಬೇಡಿಕೆಯನ್ನು ಆ ಮೂಲಕ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರಿದ್ದ ಪೀಠ ಬದಿಗೆ ಸರಿಸಿತು.
ಒಂದು ವೇಳೆ ಅರ್ಜಿಗೆ ತಡೆ ನೀಡದೆ ಹೋದರೆ ಅಂತ್ಯವಿಲ್ಲದ ಅನುಕಂಪ ಆಧಾರಿತ ನೇಮಕಾತಿಗೆ ಅನುಮತಿ ನೀಡಿದಂತಾಗುತ್ತದೆ ಎಂದು ಅದು ಹೇಳಿತು.




