ಬೆಂಗಳೂರು : ಪರಿಶಿಷ್ಟ ಜಾತಿಯ ಒಳಮೀಸಲಾತಿಗೆ ಸಮೀಕ್ಷೆ ನಡೆಸಲು ಗಣತಿದಾರರ ನೇಮಕ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಹೆಚ್ ಎನ್ ನಾಗಮೋಹನ ದಾಸ್ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು ದಿನಾಂಖ:27-03-2025 ರಂದು ಸನ್ಮಾನ್ಯ ಮುಖ್ಯ ಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕಾಗಿದ್ದು, ಅದರಂತೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಿರುತ್ತದೆ.