ಪುಣೆ: ಆಪರೇಷನ್ ಸಿಂಧೂರ್ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್ ಅನ್ನು ಹಂಚಿಕೊಂಡಿದ್ದ ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠ ಪನೋಲಿಯನ್ನು ಕೋಲ್ಕತ್ತಾ ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ.
ಶರ್ಮಿಷ್ಠ ಪನೋಲಿ ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡು ಅಗೌರವ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು.
ವಿಡಿಯೋ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಆಕೆ ಅದನ್ನು ಅಳಿಸಿ ಹಾಕಿದ್ದಾಳೆ. ಮಾತ್ರವಲ್ಲದೇ ತನ್ನ ಹೇಳಿಕೆಗಳಿಗೆ ಕ್ಷಮೆಯಾಚಿಸಿದ್ದಾಳೆ.
ಆದರೂ ಈ ಘಟನೆಯ ಬಗ್ಗೆ ಕೋಲ್ಕತ್ತಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಂತರ ಕೋಲ್ಕತ್ತಾ ಪೊಲೀಸರು ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ವಿವಾದದ ಬಳಿಕ ಪನೋಲಿ ಮತ್ತು ಆಕೆಯ ಕುಟುಂಬ ಪರಾರಿಯಾಗಿದ್ದರಿಂದ ಆಕೆಗೆ ಕಾನೂನು ನೋಟಿಸ್ ಜಾರಿ ಮಾಡಲು ಪದೇ ಪದೇ ಮಾಡಿದ ಪ್ರಯತ್ನಗಳು ವಿಫಲವಾಗಿದ್ದವು. ಇದರ ನಂತರ ನ್ಯಾಯಾಲಯ ಆಕೆಗೆ ಬಂಧನ ವಾರಂಟ್ ಹೊರಡಿಸಿತ್ತು.
ಅಂತಿಮವಾಗಿ ಪನೋಲಿಯನ್ನು ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. ಪನೋಲಿ ಬಂಧನವಾದ ಬಳಿಕ ಶನಿವಾರ ಕೋಲ್ಕತ್ತಾದ ಅಲಿಪೋರ್ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.




