ಬೆಂಗಳೂರು : ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವವರೆಗೆ ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಯಲ್ಲಿ ಮಾತನಾಡಿ, ಸಿಎಂ ವಿರುದ್ಧದ ಮುಡಾ ಹಗರಣ ಸಂಬಂಧ ನಮ್ಮ ಹೋರಾಟವು ನಿರಂತರವಾಗಿ ನಡೆಯುತ್ತಿರುವುದಕ್ಕೆ ಪ್ರಕರಣ ಈ ಹಂತಕ್ಕೆ ಬಂದು ನಿಂತಿದೆ ಎಂದರು.
ಹಗರಣ ಬೆಳಕಿಗೆ ಬಂದಾಗ ಬಿ.ನಾಗೇಂದ್ರ ತಾನು ರಾಜೀನಾಮೆ ಕೊಡಲ್ಲ ಎಂದಿದ್ದರು. ಆದರೆ ಕಾನೂನಿನ ಕುಣಿಕೆಯಲ್ಲಿ ಸಿಲುಕಿದಾ ರಾಜೀನಾಮೆ ಕೊಟ್ಟರು. ಅದೇ ರಿತಿ ಸಿದ್ದರಾಮಯ್ಯ ಅವರೂ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಭವಿಷ್ಯ ನುಡಿದರು.
ಇನ್ನು ಚುನಾವಣಾ ಬಾಂಡ್ ಬಗ್ಗೆ ಮಾತನಾಡುವ ಕಾಂಗ್ರೆಸ್ 1,500 ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೇಣಿಗೆ ಪಡೆದಿದೆ ಎಂದು ಅಶೋಕ್ ಇದೇ ವೇಳೆ ಗಂಭೀರವಾಗಿ ಆರೋಪಿಸಿದರು.