Ad imageAd image

ಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಕರ್ನಾಟಕದಲ್ಲೂ ಕಾಂಗ್ರೆಸ್‌ ಅಡ್ರೆಸ್ ಇಲ್ಲದಂತಾಗುತ್ತೆ : ಅಶೋಕ್ ಕಿಡಿ

Bharath Vaibhav
ಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಕರ್ನಾಟಕದಲ್ಲೂ ಕಾಂಗ್ರೆಸ್‌ ಅಡ್ರೆಸ್ ಇಲ್ಲದಂತಾಗುತ್ತೆ : ಅಶೋಕ್ ಕಿಡಿ
WhatsApp Group Join Now
Telegram Group Join Now

ಬೆಂಗಳೂರು: ಕನ್ನಡಿಗರ ಸ್ವಾಭಿಮಾನ ಕಣಕಬೇಡಿ. ಈಗಾಗಲೇ ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಅಡ್ರೆಸ್ ಇಲ್ಲದಂತಾಗಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಪೆಟ್ಟು ಬಿದ್ದರೆ ಕರ್ನಾಟಕದ ಕಾಂಗ್ರೆಸ್ ಪಕ್ಷ ನಿರ್ವಾಮ ಆಗುವುದು ಗ್ಯಾರಂಟಿ ಎಂದು ವಿಧಾನಸಭೆಯ ಪ್ರತಿವಸ್ತ್ರದ ನಾಯಕ ಆರ್.ಅಶೋಕ್‌ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರೇ, ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ತಿಂಗಳ ಸಂಬಳ ಅಲ್ಪಲ್ಲ ಅಂತ ಹೇಳಿದ್ದೀರಲ್ಲಾ, ಇದೇವಾ ಮತದಾರರಿಗೆ ನೀವು ಕೊಡುವ ಗೌರವ? ಎಂದು ಪ್ರಶ್ನೆ ಮಾಡಿದ್ದಾರೆ.

ಗೃಹಲಕ್ಷ್ಮಿ ಹಣ ಕೂಡಿ, ಅನ್ನಭಾಗ್ಯದ ಹಣ ಹೊಡಿ ಎಂದು ಮತದಾರರೇನು ನಿಮ್ಮ ಬಳಿ ಭಿಕ್ಷೆ ಬೇಡುತ್ತಿಲ್ಲ. ಈ ಗ್ಯಾರಂಟಿ ಯೋಜನೆಗಳನ್ನು ಪ್ರಾರಂಭಿಸಿ ಎಂದು ಜನತೆ ಹೇಳಿಯೂ ಇರಲಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಕಾಂಗ್ರೆಸ್ ಪಕ್ಷದ ಅಧಿಕಾರದ ತೆವಲಿಗೆ ಬೇಕಾಬಿಟ್ಟಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಈಗ ಮತದಾರರ ಬಗ್ಗೆ ಕೀಳಾಗಿ ಯಾಕೆ ಮಾಡುತ್ತೀರಿ?ನಿಮ್ಮ ಕೈಲಾದರೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನಗಳನ್ನು ಗೌರವದಿಂದ ಜಾರಿ ಮಾಡಿ ನಿಮ್ಮ ಕೈಲಾಗದಿದ್ದರೆ ಬಿಟ್ಟು ಬಿಡಿ. ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ಜಾರಿ ಆಗುವ ಮುನ್ನವೂ ಜನರು ತಮ್ಮ ಬದುಕು ಕಟ್ಟಿಕೊಂಡಿದ್ದರು. ಅವು ಇಲ್ಲದೆಯೂ ತಮ್ಮ ಬದುಕು ಕಟ್ಟಿಹೊಳ್ಳುತ್ತಾರೆ. ಕಾಂಗ್ರೆಸ್‌ ಕೋಳಿ ಕೂಗಿದರೆ ಕರ್ನಾಟಕದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುತಿ ಕನ್ನಡಿಗರಿಗೆ ಬಂದಿಲ್ಲ ಎಂದು ಅಶೋಕ್ ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!