ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ರಾಜ್ಯದ ಕ್ರೀಡಾಪಟುಗಳಿಗೆ ರ್ಕಾರದಿಂದ ೬ ಕೋಟಿ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ರ್ನಾಟಕ ಒಲಂಪಿಕ್ ೨೦೨೫ ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.
೧೯೫೮ ರಲ್ಲಿ ಪ್ರಾರಂಭವಾದ ಒಲಂಪಿಕ್ಸ್ ಸಂಸ್ಥೆ ಇಲ್ಲಿಯವರೆಗೆ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತಾ ಬಂದಿದೆ. ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜ್ ಅವರು ಸಂಸ್ಥೆಯ ಅಧ್ಯಕ್ಷತೆ ವಹಿಸಿಕೊಂಡ ನಂತರ ಸಂಸ್ಥೆಯು ಹೆಚ್ಚು ಕ್ರಿಯಾಶೀಲವಾಗಿದೆ.
ಕ್ರೀಡಾ ಸಾಧಕರಿಗೆ ಸಿಎಂ ಸಿದ್ದರಾಮಯ್ಯರಿಂದ ಪ್ರಶಸ್ತಿ ವಿತರಣೆ




