ಸೇಡಂ: ತಾಲೂಕಿನ ಮುಧೋಳ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ನಾಡೆಪಲ್ಲಿ ಗ್ರಾಮದಲ್ಲಿ ಸಿಪಿಐ ದೌಲತ್ ಎನ್ ಕೆ ಅವರ ಆದೇಶದ ಮೇರೆಗೆ ಎ,ಎಸ್,ಐ ಗೌರಿಶಂಕರ್ ಮತ್ತು ಹೆಡ್ ಕಾನ್ಸ್ಟೇಬಲ್ ಮಲ್ಲಿಕಾರ್ಜುನ್ ಇವರು ಬೀಟ್ ಜಾರಿ ಕರ್ತವ್ಯ ನಿರ್ವಹಿಸಿ ಗ್ರಾಮದ ಸಾರ್ವಜನಿಕರಿಗೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳೊಂದಿಗೆ ಚರ್ಚೆ ಮಾಡಿ ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಮ್ ನಿಂದ ತಪ್ಪಿಸಿಕೊಳ್ಳುವ ಬಗ್ಗೆ ಹಾಗೂ ತುರ್ತು ಸಹಾಯಕ್ಕಾಗಿ 112 ಗೆ ಕರೆ ಮಾಡಲು ತಿಳಿಸಿ ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಎ,ಎಸ್,ಐ ಗೌರಿಶಂಕರ್ ಅವರು ಮಾತನಾಡಿ ಮುಧೋಳ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ನಿಮ್ಮ ರಕ್ಷಣೆಗೆ ಸದಾ ಸಿದ್ಧರಿರುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಧೋಳ್ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗ ಮತ್ತು ನಾಡೆಪಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ಶಾಲೆ ಮಕ್ಕಳು ಭಾಗಿಯಾಗಿದ್ದರು.
ವರದಿ :ವೆಂಕಟಪ್ಪ ಕೆ ಸುಗ್ಗಾಲ್




