Ad imageAd image
- Advertisement -  - Advertisement -  - Advertisement - 

ಯಾವುದೇ ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ : ಬಿ.ವೈ.ವಿಜಯೇಂದ್ರ 

Bharath Vaibhav
ಯಾವುದೇ ಅಧಿಕಾರ ದಾಹದಿಂದ ಪಾದಯಾತ್ರೆ ಹಮ್ಮಿಕೊಂಡಿಲ್ಲ : ಬಿ.ವೈ.ವಿಜಯೇಂದ್ರ 
BY VIJENDRA
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಇತಿಹಾಸದಲ್ಲಿ ಇಂಥ ಬೃಹತ್ ಪಾದಯಾತ್ರೆಯನ್ನು ಯಾರೂ ಹಮ್ಮಿಕೊಂಡಿರಲಿಲ್ಲ. ಯಾವುದೇ ಅಧಿಕಾರ ದಾಹದಿಂದ ನಮ್ಮ ಈ ಪಾದಯಾತ್ರೆ ಹಮ್ಮಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಾಲ್ಕನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯ ಸಂದರ್ಭದಲ್ಲಿ ಅವರು ಮಾತನಾಡಿದರು.ಭ್ರಷ್ಟ ಕಾಂಗ್ರೆಸ್ ಸರಕಾರ ಮತ್ತು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕಿತ್ತೆಸೆಯಬೇಕೆಂದು ಸಂಕಲ್ಪದೊಂದಿಗೆ ಈ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಆರೂವರೆ ಕೋಟಿ ಜನರಿಗೆ ಚುನಾಯಿತ ಸರಕಾರ ಇದೆ ಎಂದು ಅನಿಸುತ್ತಿಲ್ಲ. ಕಾಂಗ್ರೆಸ್‌ನವರು ಅನೇಕ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದೆ. ಕಳೆದ 14 ತಿಂಗಳಿನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಸಿದ್ದಾರೆ.

ಹಾಲಿನ ದರ ಹೆಚ್ಚಿಸಿದರೂ ಅದರ ಪ್ರಯೋಜನ ರೈತರು, ಹೈನುಗಾರರಿಗೆ ಲಭಿಸಿಲ್ಲ. ಯಡಿಯೂರಪ್ಪನವರು, ಬಿಜೆಪಿ ಸರಕಾರವು ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡುತ್ತಿತ್ತು ಎಂದು ವಿವರಿಸಿದರು.

ಸಿದ್ದರಾಮಯ್ಯನವರು ರೈತರ ಬಗ್ಗೆ ಮೊಸಳೆಕಣ್ಣೀರು ಹಾಕುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ 1200 ಕೋಟಿ ರೂ. ಹಾಗೇ ಉಳಿಸಿಕೊಂಡಿದ್ದಾರೆ. ನೋಂದಣಿ ಶುಲ್ಕ ಹೆಚ್ಚಾಗಿದೆ. ಅಕ್ಕಿ, ದವಸ ಧಾನ್ಯವೂ ದುಬಾರಿಯಾಗಿದೆ. 1 ಲಕ್ಷ 95 ಸಾವಿರ ಕೋಟಿ ಸಾಲವನ್ನು ಸಿದ್ದರಾಮಯ್ಯನವರ ಸರಕಾರ ಮಾಡಿದೆ ಎಂದು ಟೀಕಿಸಿದರು.

 

WhatsApp Group Join Now
Telegram Group Join Now
Share This Article
error: Content is protected !!