ಬೆಂಗಳೂರು: ಕರ್ನಾಟಕ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿದ್ದಂತ ಬಿ.ವೈ ವಿಜಯೇಂದ್ರ ಅವರು, ಇಂದು ಅಧಿಕೃತವಾಗಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಹೌದು ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಪದಗ್ರಹಣ ಮಾಡಲಿದ್ದಾರೆ.ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತದೆ.
ಈ ಬಳಿಕ ಜಗನ್ನಾಥ ಭವನದ ಮುಂಭಾಗ ಗೋಪೂಜೆ ನಡೆಸಲಿರುವ ವಿಜಯೇಂದ್ರ ಅವರು, ನಂತ್ರ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಗಣಪತಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಲಿದ್ದಾರೆ.
ಈ ವೇಳೆ ನಳಿನ್ ಕುಮಾರ್ ಕಟೀಲ್ ಕೂಡ ಇರಲಿದ್ದಾರೆ. ಬಳಿಕ ಹಾಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವಂತ ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.