ಬಾಗಲಕೋಟೆ : ಮದುವೆಗೆ ಎಂದು ಹೊರಟಿದ್ದ ಕ್ರೂಜರ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗಸಾಪಾಟ ಬಳಿ ಈ ಅಪಘಾತ ಸಂಭವಿಸಿದೆ.
ಮಹಾರಾಷ್ಟ್ರದ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದು, ಭೀಕರವಾದ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ನಾಲ್ವರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ಮದುವೆಗೆ ಎಂದು ಹೊರಟಿದ್ದರು ಈ ವೇಳೆ ಖಾಸಗಿ ಬಸ್ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಜತ್ತ ಬಳಿಯ ನಾಗ ಸಾಪಾಟ ಬಳಿ ಈ ಅಪಘಾತ ಸಂಭವಿಸಿದೆ.ಖಾಸಗಿ ಬಸ್ಗೆ ಕ್ರೂಜರ್ ಡಿಕ್ಕಿಯಾಗಿ ನಾಲ್ವರು ದುರ್ಮರಣ ಹೊಂದಿದ್ದಾರೆ. ವಧುವಿನ ತಂಗಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಾಗಲಕೋಟೆ ಜಿಲ್ಲೆಯ ಭಾಗ್ಯಶ್ರೀ ಅಂಬೇಕರ್ (18) ನಿವೇದಿತ (17) ಉಜ್ವಲ ಶಿಂದೆ (19) ಸ್ಥಳದಲ್ಲಿ ಸಾವನಪ್ಪಿದ್ದಾರೆ.ವಿಜಯಪುರ ಜಿಲ್ಲೆಯ ಅನುಸೂಯ ಮೊರೆ (56) ಎನ್ನುವ ಮಹಿಳೆ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.