Ad imageAd image

ಪ್ರಜ್ವಲ್ ರೇವಣ್ಣ 3ನೇ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ

Bharath Vaibhav
ಪ್ರಜ್ವಲ್ ರೇವಣ್ಣ 3ನೇ ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾ
prajwal revanna
WhatsApp Group Join Now
Telegram Group Join Now

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ, ಈಗ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲೂ ಸಂಕಷ್ಟ ಎದುರಾಗಿದೆ.

ಅವರು ಕೆ.ಆರ್ ನಗರ ಸಂತ್ರಸ್ತೆ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರಡು ಪ್ರಕರಣಗಳಲ್ಲಿ ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈಗ ಮೂರನೇ ಪ್ರಕರಣದಲ್ಲೂ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಈ ಪ್ರಕರಣದಲ್ಲೂ ಎಸ್‌ಐಟಿ ವಶಕ್ಕೆ ಪಡೆದು ವಿಚಾರಣೆ ನಡೆಸೋ ಸಾಧ್ಯತೆ ಇದೆ.

ಮತ್ತೊಂದೆಡೆ ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಇಂದು ಸೈಬರ್ ಅಪರಾಧ ಠಾಣೆ FIR ಸಂಖ್ಯೆ.2/2024 ರಲ್ಲಿ ವಶಕ್ಕೆ ಪಡೆದಿದ್ದ ಎಸ್‌ಐಟಿ ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದು, 6 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

WhatsApp Group Join Now
Telegram Group Join Now
Share This Article
error: Content is protected !!