ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾಗೊಂಡಿದೆ.
ಫಯಾಸ್ ಜಾಮೀನು ಅರ್ಜಿ ವಜಾಗೊಳಿಸಿ ಧಾರವಾಡ ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಎಂ ಕಾಲೇಜಿನಲ್ಲಿ ನೇಹಾ ಹಿರೇಮಠ್ ರನ್ನು ಕೊಲೆ ಮಾಡಲಾಗಿತ್ತು.
ಕಾಲೇಜ್ ಕ್ಯಾಂಪಸ್ ನಲ್ಲಿಯೇ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ್ದ ಆರೋಪಿ ಫಯಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದನು. ಆರೋಪಿ ನಟ ದರ್ಶನ್ ಅವರಿಗೆ ಜಾಮೀನು ನೀಡಿದಂತೆ ನನಗೂ ಜಾಮೀನು ನೀಡಿ ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದನು.




