ಹಾಸನ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಇರುವ ಪೆನ್ ಡ್ರೈವ್ ಅನ್ನು ಹಂಚಿದ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಇದೀಗ ಹಾಸನ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಡಿ ವಕೀಲ ಪೂರ್ಣಚಂದ್ರ ಅವರು ಹಾಸನದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಆರೋಪಿಗಳಾದ ಕಾರ್ತಿಕ್, ನವೀನ್, ಚೇತನ್, ಪುಟ್ಟರಾಜ್ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಈ ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ಹಾಸನ ಜಿಲ್ಲಾ ಜಿಲ್ಲಾ 3 ನೇ ಅಧಿಕ ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿಬಂದಿದೆ.