ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 7 ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ಎ1 ಪವಿತ್ರಾ ಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ, ಶುಕ್ರವಾರ ಮಧ್ಯಾಹ್ನ ತೀರ್ಪು ಪ್ರಕಟಿಸಿದೆ.
ಜೈಲಿನಲ್ಲಿದ್ದ ದರ್ಶನ್‌ಗೆ ಬೆನ್ನು ನೋವಿನ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅ.30ರಂದು ಹೈಕೋರ್ಟ್ ಆರು ವಾರ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಅವಧಿ ಮುಕ್ತಾಯಗೊಂಡರೂ ಶಸ್ತಚಿಕಿತ್ಸೆ ನಡೆದಿರಲಿಲ್ಲ. ರಕ್ತದೊತ್ತಡ ಹಿನ್ನೆಲೆಯಲ್ಲಿ ಪೂರಕ ಚಿಕಿತ್ಸೆ ನೀಡಲಾಗುತ್ತಿತ್ತು.
ಹೀಗಾಗಿ ಮತ್ತಷ್ಟು ದಿನ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಬೇಕು ಎಂದು ವಕೀಲರು ಮನವಿ ಮಾಡಿದ್ದರು. ಇದರಿಂದ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿದ್ದ ಕೋರ್ಟ್, ಇದೀಗ ದರ್ಶನ್ ಸೇರಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.