ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಸೇನಾ ಮುಖ್ಯಸ್ಥ ಉಜ್ ಜಮಾನ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೃಢಪಡಿಸಿದರು.
ಅಧ್ಯಕ್ಷರೊಂದಿಗೆ ಚರ್ಚಿಸಿದ ನಂತರ ಹೊಸ ಸರ್ಕಾರ ದೇಶವನ್ನು ನಡೆಸುತ್ತದೆ ಎಂದು ವೇಕರ್ ಉಜ್ ಜಮಾನ್ ಹೇಳಿದರು. ‘ನಾವು ದೇಶಕ್ಕೆ ಶಾಂತಿಯನ್ನು
ಮರಳಿಸುತ್ತೇವೆ.ಹಿಂಸಾಚಾರವನ್ನು ನಿಲ್ಲಿಸುವಂತೆ ನಾವು ನಾಗರಿಕರನ್ನು ಕೇಳುತ್ತೇವೆ. ಕಳೆದ ಕೆಲವು ವಾರಗಳಲ್ಲಿ ನಡೆದ ಎಲ್ಲಾ ಹತ್ಯೆಗಳ ಬಗ್ಗೆ ನಾವು ತನಿಖೆ ನಡೆಸುತ್ತೇವೆ” ಎಂದು ಜಮಾನ್ ಹೇಳಿದರು.
“ದೇಶದಲ್ಲಿ ಕರ್ಫ್ಯೂ ಅಥವಾ ಯಾವುದೇ ತುರ್ತು ಪರಿಸ್ಥಿತಿಯ ಅಗತ್ಯವಿಲ್ಲ, ಇಂದು ರಾತ್ರಿಯೊಳಗೆ ಬಿಕ್ಕಟ್ಟಿಗೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ” ಎಂದು ಬಾಂಗ್ಲಾದೇಶ ಸೇನಾ ಮುಖ್ಯಸ್ಥರು ಹೇಳಿದರು. ಯಾವುದೇ ಗುಂಡು ಹಾರಿಸದಂತೆ ಸೇನೆ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಜಮಾನ್ ಹೇಳಿದ್ದಾರೆ.
ಇದರ ನಡುವೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ತ್ರಿಪುರಾದ ರಾಜಧಾನಿ ಅಗರ್ತಲಾಕ್ಕೆ ಬಂದಿಳಿದಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ. ಭಾರತಕ್ಕೆ ಆಗಮಿಸುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲ.