ಬೆಳಗಾವಿ : ಹಾಡಹಗಲೇ ಸಂತೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.
25 ವರ್ಷದ ಮಲಿಕ್ ಹತ್ಯೆಯಾದ ದುರ್ದೈವಿ.ಜನರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೈಕ್ ನಲ್ಲಿ ಹೋಗುತ್ತಿದ್ದ ಮಲಿಕ್ ಕಿಲ್ಲೇಧಾರ್ ಎಂಬ ಯುವಕನನ್ನು ಹತ್ಯೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.




