ಬೆಂಗಳೂರು: ಮದ್ಯ ಖರೀದಿಸಲು ಹಣ ನೀಡದ ಪತ್ನಿಯನ್ನು ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಗುಡ್ಡನಹಳ್ಳಿ ಬಳಿ ಭಾನುವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ನೂಕಲಮ್ಮ (45) ಎಂದು ಗುರುತಿಸಲಾಗಿದ್ದು, ಆರೋಪಿ ಗೋರಿ (58) ಎಂಬಾತನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇಬ್ಬರೂ ಒಡಿಶಾ ಮೂಲದವರಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು.
ದಂಪತಿಗೆ ಭಾನುವಾರ ಸಂಬಳ ಬಂದಿದ್ದು, ಇಬ್ಬರೂ ಮದ್ಯ ಸೇವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ, ಹೆಚ್ಚಿನ ಮದ್ಯ ಖರೀದಿಗೆ ಪತ್ನಿಯನ್ನು ಪೀಡಿಸಿದ್ದಾನೆ. ಇದಕ್ಕೆ ನಿರಾಕರಿಸಿದಾಗ ಇಬ್ಬರ ನಡುವೆ ಜಗಳವಾಗಿದೆ.
ಈ ಜಗಳ ತಾರಕಕ್ಕೇರಿದೆ. ಬಳಿಕ ಆರೋಪಿ ಪತ್ನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಘಟನೆ ಬಳಿಕ ಆರೋಪಿಯನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ




